ಮೈಸೂರು: ಕೋಲಾರದಲ್ಲಿ ನಮ್ಮ ತಂದೆ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ಇನ್ನು ಎರಡು ಮೂರು ದಿನಗಳಲ್ಲಿ ತಮ್ಮ ನಿರ್ಧಾರ ತಿಳಿಸಲಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮಾಧ್ಯಮದ ವರೊಂದಿಗೆ ಮಾತನಾಡಿ, ಕೋಲಾರದಲ್ಲಿ ನಾನು ಕೂಡ ಎರಡು ಬಾರಿ ಆಂತರಿಕ ಸರ್ವೆ ಮಾಡಿಸಿದ್ದೇನೆ. ಸಿದ್ದರಾಮಯ್ಯ ಪರವಾಗಿಯೇ ಆಂತರಿಕ ಸರ್ವೆ ಫಲಿತಾಂಶ ಬಂದಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ಒಂದು ವೇಳೆ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರಕ್ಕೆ ಬಂದರೆ ನಾನು ಕ್ಷೇತ್ರ ಬಿಟ್ಟು ಕೊಡುತ್ತೇನೆ. ಆದರೆ ನಾನು ಬೇರೆ ಯಾವುದೇ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವುದಿಲ್ಲ ಎಂದರು.
ಕೋಲಾರದಲ್ಲಿ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ವಿಚಾರವಾಗಿ ಸಭೆ ನಡೆದಿದ್ದು, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಲೇಬೇಕೆಂದು ಒತ್ತಡ ಹೇರಲು ನಿರ್ಧರಿಸಲಾಗಿದೆ. ಅಷ್ಟೇ ಅಲ್ಲದೇ ಅಗತ್ಯ ಬಿದ್ದರೆ ಧರಣಿ ಮಾಡಲು ನಿರ್ಧರಿಸಲಾಗಿದೆ.