ಬೀದರ್: ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ ಎಂಬ ಕೂಗುಗಳು ಸ್ವಪಕ್ಷೀಯರಿಂದಲೇ ಕೇಳಿಬಂದ ಬೆನ್ನಲ್ಲೇ ಯಡಿಯೂರಪ್ಪ ಗೌರವಯುತವಾಗಿ ನಿವೃತ್ತಿ ಘೋಷಿಸಲಿ ಎಂದು ಕಾಂಗ್ರೆಸ್ ನಾಯಕ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರು ಒಗ್ಗಟ್ಟಾದ್ರು, ಕೈ ಜೋಡಿಸಿದ್ರು ಕಾಂಗ್ರೆಸ್‌ಗೆ ಯಾವುದೇ ರೀತಿ ಸಮಸ್ಯೆ ಆಗೊಲ್ಲಾ ಎಂದಿದ್ದಾರೆ.
ಬಿಜೆಪಿ ಯಡಿಯೂರಪ್ಪರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಯಡಿಯೂರಪ್ಪನವರು ಗೌರವಯುತವಾಗಿ ನಿವೃತ್ತಿ ಆದರೆ ಒಳ್ಳೆಯದು. ಅಷ್ಟೊಂದು ಅವಮಾನ ಮಾಡಿದರೂ ಯಾಕೆ ಈ ರೀತಿ ಹೇಳಿಕೆ ನೀಡ್ತಿದ್ದಾರೋ ಗೊತ್ತಿಲ್ಲಾ ಎಂದಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಯೋಜನೆಗಳ ಮೆಚ್ಚಿ, ಸಿಎಂಗೆ ಪತ್ರ ಬರೆದ ವಿದ್ಯಾರ್ಥಿನಿ
ದೇಶದ ಹೆಸರು ಭಾರತ ಎಂದು ಬದಲಾವಣೆ ಮಾಡುತ್ತಿರುವ ವರದಿ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹೇಳೊದು ಒಂದು ಮಾಡೋದು ಇನ್ನೊಂದು. ಯಾವ ರೀತಿ ಸುಳ್ಳುಗಳನ್ನು ಬಿತ್ತರಿಸುತ್ತಿದ್ದಾರೆ ಅನ್ನೋದನ್ನ ಜನ ಅರಿತುಕೊಂಡಿದ್ದಾರೆ. ಮೈತ್ರಿಕೂಟಕ್ಕೆ ಜನ ಬೆಂಬಲ ನೀಡುತ್ತಾರೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.