Monday, December 4, 2023
spot_img
- Advertisement -spot_img

ವಿಜಯೇಂದ್ರ ಆಯ್ಕೆ; ನಮಗಾಗದವರು ವಿಷಯವನ್ನು ದೊಡ್ಡದು ಮಾಡ್ತಿದ್ದಾರೆ: ವಿಶ್ವನಾಥ್

ಬೆಂಗಳೂರು: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಯೆಯಾಗಿದ್ದಕ್ಕಾಗಿ ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಕೆಲವರು ಈ ವಿಷಯವನ್ನು ದೊಡ್ಡದಾಗಿ ಬಿಂಬಿಸಲು ಹೊರಟಿದ್ದಾರೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ವಿಜಯೇಂದ್ರ ಪರ ಬ್ಯಾಟ್ ಬೀಸಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಿಜೆಪಿ ಪಕ್ಷ ಕೇಡರ್ ಬೇಸಿಸ್ ಪಕ್ಷವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರನ್ನು ನಾವು ಲಿಂಗಾಯಿತರೆಂದು ನೋಡಿಲ್ಲ. ಅವರು ಎಲ್ಲ ಜನಾಂಗದ ನಾಯಕಲ್ಲದೆ, ನಮ್ಮ‌ ನೆಚ್ಚಿನ‌ ರಾಜ್ಯದ ಹೆಮ್ಮೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಧಿಕಾರಕ್ಕೆ ಬಂದರೆ ಉಚಿತವಾಗಿ ಆಯೋಧ್ಯೆ ಟ್ರಿಪ್: ರಾಜ್‌ನಾಥ್ ಸಿಂಗ್ ಭರವಸೆ

ನಮಗೆ ನಮ್ಮ ಭಾರತ ದೇಶ ಮುಖ್ಯವಾಗಿದೆ. ನಾವು ಜಿಲ್ಲೆ, ಪ್ರಾಂತ, ಜಾತಿ ಎಂದು ಪಕ್ಷ ಕಟ್ಟಿ ಬೆಳೆಸಿದವರಲ್ಲ. ಸಿ.ಟಿ‌.ರವಿ ಅವರು ಪಕ್ಷದಲ್ಲಿ ಹಾಗೂ ರಾಷ್ಟ್ರಮಟ್ಟದಲ್ಲಿ ಉನ್ನತ ಜವಾಬ್ದಾರಿಯನ್ನು ನಿರ್ವಹಿಸಿದ್ದವರು. ಅವರು ಆ ರೀತಿ ಅಸಮಾಧಾನ ಹೊರಹಾಕಿರುವುದಿಲ್ಲ ಎಂದು ಸಿಟಿ ರವಿಯವರ ಮುನಿಸನ್ನು ಅಲ್ಲಗಳೆದಿದ್ದಾರೆ.

ನಮಗೆ ಆಗದಿರುವವರು ಸಣ್ಣ ವಿಷಯವನ್ನು ದೊಡ್ಡದಾಗಿ ಮಾಡುತ್ತಿದ್ದಾರೆ. ನಮ್ಮ ಯಾವ ನಾಯಕರಲ್ಲೂ ಸಹ ವಿಜಯೇಂದ್ರ ಆಯ್ಕೆ ಬಗ್ಗೆ ಅಸಮಾಧನವಿಲ್ಲ. ರಾಜ್ಯಾದ್ಯಕ್ಷ ಹುದ್ದೆ ನಿರ್ವಹಿಸುವಷ್ಟು ಸಾಮರ್ಥ್ಯ ಅವರಲ್ಲಿದೆ ಎಂದು ವಿಶ್ವನಾಥ್ ಹೇಳಿದ್ದಾರೆ.

ವೈಚಾರಿಕ ಬದ್ಧತೆ ಜೊತೆಗೆ ಪಕ್ಷ ಕಟ್ಟುವ ಕೆಲಸ ಮಾಡಬೇಕಿದೆ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿವೈ ವಿಜಯೇಂದ್ರ ಆಯ್ಕೆಯಾಗಿರುವುದ್ದಕ್ಕೆ ಮಾಜಿ ಸಚಿವ ಸಿ.ಟಿ ರವಿ ಪರೋಕ್ಷವಾಗಿ ಅಸಮಧಾನ ಹೊರ ಹಾಕಿದ್ದರು.

ಮಧ್ಯಪ್ರದೇಶದಿಂದ ಹಿಂದಿರುಗುವ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ದ ಅವರು, ವಿಜಯೇಂದ್ರ ಅವರನ್ನು ಪಕ್ಷ ನೇಮಕ ಮಾಡಿದೆ. ವೈಚಾರಿಕ ಬದ್ಧತೆ ಜೊತೆಗೆ ಪಕ್ಷ ಕಟ್ಟುವ ಕೆಲಸ ಮಾಡಬೇಕಿದೆ. ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28ಸ್ಥಾನಗಳನ್ನು ಗೆಲ್ಲಿಸುವ ಹೊಣೆಗಾರಿಕೆ ಇದೆ, ಯಶಸ್ವಿಯಾಗಲಿ ಎಂದು ಹೇಳಿದ್ದರು.

ಇದನ್ನೂ ಓದಿ : ವಿದ್ಯುತ್ ಕಳವು ಆರೋಪ; ನಮ್ಮಿಂದ ತಪ್ಪಾಗಿದ್ರೆ ರಾಜ್ಯದ ಜನರ ಕ್ಷಮೆ ಕೇಳ್ತೀನಿ ಎಂದ ನಿಖಿಲ್

ನೀವು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಇದ್ರಲ್ಲಾ ಸರ್, ಆದರೆ ಕೊನೆ ಕ್ಷಣದಲ್ಲಿ ಬದಲಾಯಿತಲ್ಲಾ? ಎಂದು ಪತ್ರಕರ್ತರು ಕೇಳಿದ್ದಕ್ಕೆ, ಬದಲಾಗದೆ ಇರೋದು ಕಾರ್ಯಕರ್ತ ಅನ್ನೋದಕ್ಕೆ. ಈಗ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದು ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದ್ದರು.

ನೂತನ ಅಧ್ಯಕ್ಷರ ಆಯ್ಕೆ ಬಗ್ಗೆ ಕಾಂಗ್ರೆಸ್‌ ಟೀಕಿಸಿತ್ತು. ಈ ಕುರಿತು ಕೇಳಿದಾಗ, ಅಸಮಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ. ಈಗಾಗಲೇ ಬಹಳಷ್ಟು ಮಾತನಾಡಿದ್ದೇನೆ. ಕಳೆದ 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಬೂತ್ ಅಧ್ಯಕ್ಷನಿಂದ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿವರೆಗೂ ಜವಾಬ್ದಾರಿ ನಿರ್ವಹಿಸಿದ್ದೇನೆ. ಈಗಾಗಲೇ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತದೆ ಎಂದು ಹೇಳಿದ್ದರು.

ಬಹು ನಿರೀಕ್ಷಿತ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕೊನೆಗೂ ಆಗಿದೆ. ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಪುತ್ರ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕ ಬಿವೈ ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಶುಕ್ರವಾರ ಆದೇಶ ಹೊರಡಿಸಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles