ಮಂಡ್ಯ: ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಜನರ ಬಲಿ ಕೊಟ್ಟಿದ್ದೀರಿ, I.N.D.I.A ಗೋಸ್ಕರ ನೀರು ಬಿಟ್ಟಿದ್ದೀರಿ ಎಂದು ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಕಾವೇರಿ ನೀರು ವಿವಾದ ಸಂಬಂಧ ಮಾತನಾಡಿರುವ ಅವರು, ಕಾಂಗ್ರೆಸ್ ಮಂಡ್ಯ ಜನರಿಗೆ ಶಾಪ, ತಮಿಳುನಾಡಿಗೆ ವರ. ನಿಮ್ಮ ಲಾಭಕ್ಕೆ ರಾಜ್ಯದ ಜನತೆಗೆ ನೀವು ಶಾಪ ಆಗಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಂಕಷ್ಟದ ಸೂತ್ರ ಮರೆತು ನೀರು ಬಿಟ್ಟಿದ್ದೀರಿ. ಸಂಕಷ್ಟದ ಸೂತ್ರ ಬದಿಗೊತ್ತಿ ರಾಜಕೀಯ ಮಾಡ್ತಿದ್ದೀರಿ. ತಮಿಳುನಾಡಿಗೆ ನೀರು ಬಿಟ್ಟು ಈಗ ಸಭೆ ಮಾಡಿದ್ರೆ ಏನು ಪ್ರಯೋಜನ. ನೀರು ಬಿಡುವ ಮೊದಲೇ ಸಭೆ ಮಾಡಬೇಕಿತ್ತು. ಇದು ಕಾಂಗ್ರೆಸ್ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ. ಬರಗಾಲದಲ್ಲೂ ನೀರು ಬಿಡುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಶಾಸಕರು-ಸಚಿವರ ದಿಢೀರ್ ಸಭೆ ಕರೆದ ಸಿಎಂ; ಏನೆಲ್ಲಾ ಚರ್ಚೆಯಾಗಲಿದೆ?
ಉಚಿತ ಕರೆಂಟ್ ಎಂಬುದು ಹಾಸ್ಯಾಸ್ಪದ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಅಂತ ಜಾರಿ ಮಾಡಿದ್ದೀರಿ. ಶಕ್ತಿಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಅಂತ ತಂದಿದ್ದೀರಿ. ವಾಸ್ತವಿಕವಾಗಿ ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಆಗ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯ ಕತ್ತಲಲ್ಲಿ ಮುಳುಗಿದೆ. ರಾಜ್ಯಕ್ಕೆ 15-16 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಕು. ಆದರೆ ಕೇವಲ 8-9ಸಾವಿರ ಮೆಗಾವ್ಯಾಟ್ ಉತ್ಪಾದನೆ ಆಗ್ತಿದೆ. ರಾಜ್ಯ ಕತ್ತಲಲ್ಲಿ ಮುಳುಗಿದೆ. ಉಚಿತ ಕರೆಂಟ್ ಎಂಬುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.