Sunday, October 1, 2023
spot_img
- Advertisement -spot_img

ಕಾಂಗ್ರೆಸ್ ಜೊತೆ ಶರ್ಮಿಳಾರ ವೈಎಸ್‌ಆರ್ ಪಕ್ಷ ವಿಲೀನ?

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಸಾಕ್ಷಿಯಾಗಿ ಅವರು ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿಕೊಂಡಿದ್ದ ಫೋಟೋಗಳು ಹಾಗೂ ಕೇಂದ್ರ ನಾಯಕರ ಭೇಟಿಯಾಗಿ ಸುದ್ದಿಯಾಗಿದ್ದರು. ಇದೀಗ ಅವರ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ ಜೊತೆ ವಿಲೀನಗೊಳಿಸಲಿದ್ದಾರೆ ಎಂದು ವರದಿಯಾಗಿದೆ.

ಸೆಪ್ಟೆಂಬರ್ 17 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಕಾಂಗ್ರೆಸ್‌ನ ಮೆಗಾ ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು ಅವರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು.

ಇದನ್ನೂ ಓದಿ: ಕೇಂದ್ರ ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್‌

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್, ಸೆಪ್ಟೆಂಬರ್ 17 ರಂದು ತೆಲಂಗಾಣ ಏಕೀಕರಣ ದಿನವಾಗಿ ಆಚರಿಸಲಾಗುತ್ತಿದೆ ಈ ವೇಳೆ ಪಕ್ಷವು ಹೈದರಾಬಾದ್ ಬಳಿ “ಮೆಗಾ ರ‍್ಯಾಲಿ” ನಡೆಸಲಿದೆ, ಈ ವೇಳೆ ಐದು ಗ್ಯಾರಂಟಿಗಳ ಘೋಷಿಸಲಿದ್ದೇವೆ ಎಂದಿದ್ದಾರೆ.

ಈ ಕಾರ್ಯಕ್ರಮದಲ್ಲಿ ಶರ್ಮಿಳಾ ಅವರು ಭಾಗಿಯಾಗುವ ಸಂಭವವಿದೆ. ಜೊತೆಗೆ ಅವರ ಪಕ್ಷವನ್ನು ಕಾಂಗ್ರೆಸ್‌ ಜೊತೆ ವಿಲೀನಗೊಳಿಸಿ I.N.D.I.A ಮೈತ್ರಿಕೂಟಕ್ಕೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದಕ್ಕೂ ಮೊದಲು ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles