Friday, March 24, 2023
spot_img
- Advertisement -spot_img

ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಜೆಡಿಎಸ್ ಮಾಜಿ ಶಾಸಕ ವೈಎಸ್‌ವಿ ದತ್ತಾ ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್


ಬೆಂಗಳೂರು: ಜೆಡಿಎಸ್ ಮಾಜಿ ಶಾಸಕ ವೈಎಸ್‌ವಿ ದತ್ತಾ ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದತ್ತಾ, ನಾಗೇಶ್ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು, ಪಕ್ಷದ ಬಾವುಟ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ , ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ನಂತರ ಮಾತನಾಡಿದ ವೈಎಸ್‌ವಿ ದತ್ತಾ, ಇದು ಮಾತನಾಡುವ ಸಮಯವಲ್ಲ, ಕೆಲಸ ಮಾಡುವ ಸಮಯ. ಕಳೆದ ಹಲವು ದಶಕಗಳಿಂದ ನಾನು ಒಂದೇ ಪಕ್ಷದಲ್ಲಿದ್ದೆ. ಆದ್ರೆ ಈಗ ಈ ತೀರ್ಮಾನ ತೆಗೆದುಕೊಂಡಿದ್ದೇನೆ. ಇದು ನಮ್ಮ ರಾಷ್ಟ್ರದ ತುರ್ತು ಅಗತ್ಯವಾಗಿದೆ ಎಂದರು.

ಸಂವಿಧಾನ ಹಾಗೂ ಸೌಹಾರ್ದತೆಯನ್ನ ಬುಡಮೇಲು ಮಾಡುವ ಪ್ರಯತ್ನಗಳು ನಡೆದಿವೆ. ನಾನು ಮೊದಲಿನಿಂದಲೂ ಎಡಪಂಥೀಯ. ಹೀಗಾಗಿ ನನಗೆ ಅತ್ಯಂತ ಹತ್ತಿರ ಎನಿಸಿದ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಕ್ಷೇತ್ರದಲ್ಲೂ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚಿಸಿದ್ದೇನೆ. ನಾನು ಕಾರ್ಯಕರ್ತನಾಗಿ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ. ನನ್ನನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.

ಮಾಜಿ ಸಚಿವ, ಹಾಲಿ ಶಾಸಕ ಹೆಚ್. ನಾಗೇಶ್ ಮಾತನಾಡಿ, ನನಗೆ ಕಾಂಗ್ರೆಸ್ ಸಿದ್ಧಾಂತಗಳು ಇಷ್ಟ ಆಗಿ ಸೇರುತ್ತಿದ್ದೇನೆ. ನನ್ನ ತಂದೆ-ತಾಯಿ ಕೂಡ `ಕೈ’ಗೆ ಮತ ಕೊಡುತ್ತಿದ್ದರು. ರಾಜ್ಯಾದ್ಯಂತ ಪ್ರವಾಸ ಮಾಡಿ ನಮ್ಮ ಜನಾಂಗಕ್ಕೆ ತಿಳಿಹೇಳುತ್ತೇನೆ. ಕಾಂಗ್ರೆಸ್ ದಾರಿಯೇ ನನ್ನ ದಾರಿ. ಇನ್ಮುಂದೆ ನಾನು ಎಲ್ಲೂ ಹೋಗಲ್ಲ. ಸ್ವಂತ ಬಲದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.

Related Articles

- Advertisement -

Latest Articles