ದಾವಣಗೆರೆ: ಯುವನಿಧಿ ಯೋಜನೆಯನ್ನು ಡಿಸೆಂಬರ್‌ನಲ್ಲಿ ಜಾರಿಗೆ ತರಲಿದ್ದೇವೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ, ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಒಂದೊಂದೇ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ, ಡಿಸೆಂಬರ್‌ನಲ್ಲಿ ಯುವನಿಧಿ ಯೋಜನೆ ಜಾರಿಗೆ ತರುತ್ತೇವೆ. ಈ ವರ್ಷದಿಂದಲೇ ಯುವನಿಧಿ ಆರಂಭವಾಗಲಿದೆ ಎಂದಿದ್ದಾರೆ.
ಇದನ್ನೂ ಓದಿ: ಸೂಪರ್ ಸ್ಟಾರ್ ಆದ್ರೂ ಸಾರಿಗೆ ಇಲಾಖೆಯನ್ನ ಮರೆಯದ ತಲೈವಾ..!
‘ಯಾರಿಗೂ ತೊಂದರೆಯಾಗದಂತೆ ಹಣ ಹಾಕುತ್ತೇವೆ’
ಬಿಪಿಎಲ್ ಕಾರ್ಡ್‌ಗಳನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ಪರಿಷ್ಕರಣೆ ಮಾಡಿ ನಂತರ ರದ್ದತಿ ಬಗ್ಗೆ ತೀರ್ಮಾನ ಮಾಡುತ್ತೇವೆ. ಎಲ್ಲಾ ಕಾರ್ಡ್‌ದಾರರಿಗೆ ಅಕೌಂಟ್ ಮೂಲಕ ಹಣ ಹಾಕಲಾಗುತ್ತಿದೆ. ಕೆಲವೊಂದು ಕಾರ್ಡ್ ಗಳ ಅಕೌಂಟ್‌ನಲ್ಲಿ ಸಮಸ್ಯೆ ಎದುರಾಗಿ ಹಣ ಹಾಕಲು ತೊಂದರೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಗೃಹಲಕ್ಷ್ಮಿಗೆ ನಾಳೆ ಚಾಲನೆ
5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ನೀಡಲು ಭರ್ಜರಿ ತಯಾರಿ ನಡೆದಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾರ್ಯಮದ ಸಿದ್ದತೆಗಳು ಆರಂಭವಾಗಿವೆ. ಈ ಯೋಜನೆ ಮೂಲಕ ಮನೆ ಯಜಮಾನಿ ಖಾತೆಗೆ 2,000 ರೂ. ನೀಡಲಾಗುತ್ತದೆ. ಯೋಜನೆ ಜಾರಿಯಾದ ನಂತರ 1.9 ಕೋಟಿ ಮಹಿಳೆಯರ ಖಾತೆಗಳಿಗೆ ಹಣ ಹಾಕಲಾಗುತ್ತದೆ ಎಂದು ಸರ್ಕಾರ ಘೋಷಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.