ಆಂಧ್ರಪ್ರದೇಶ : ಹಣ ದುರುಪಯೋಗ ಪ್ರಕರಣದಲ್ಲಿ ಬಂಧಿತರಾಗಿರುವ ಆಂಧ್ರಪ್ರದೇಶದ ಮಾಜಿ ಸಿಎಂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡುರನ್ನು ಆಂಧ್ರಪ್ರದೇಶದ ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ.
ಕೌಶಲ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಆರೋಪದ ಮೇಲೆ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ನಂದ್ಯಾಲದಲ್ಲಿ ಬೆಳ್ಳಂಬೆಳಿಗ್ಗೆ ಬಂಧಿಸಿದ್ದರು.
ನಾಯ್ಡು ಅವರಿಗೆ ಜೀವ ಬೆದರಿಕೆ ಇರುವುದರಿಂದ ಜೈಲಿನ ಒಳಗೆ ಅವರಿಗೆ ಪ್ರತ್ಯೇಕ ಕೊಠಡಿ ಒದಗಿಸಲಾಗಿದೆ. 73 ವರ್ಷದ ನಾಯ್ಡು ಅವರಿಗೆ ನ್ಯಾಯಾಂಗ ಬಂಧನದ ವೇಳೆ ಮನೆಯ ಊಟ, ವೈದ್ಯಕೀಯ ಸೌಲಭ್ಯ ಮತ್ತು ವಿಶೇಷ ಕೊಠಡಿ ಪಡೆಯಲು ನ್ಯಾಯಾಲಯ ಅವಕಾಶ ಕಲ್ಪಿಸಿದೆ. ನಾಯ್ಡು ಅವರಿಗೆ ಝಡ್ ಪ್ಲಸ್ ಭದ್ರತೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಜಗದೀಶ್ ತಿಳಿಸಿದರು.
ಏನಿದು ಪ್ರಕರಣ ?
ಆಂಧ್ರ ಪ್ರದೇಶ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಈ ಹಗರಣದಲ್ಲಿ 371 ಕೋಟಿ ರೂಪಾಯಿ ಅಕ್ರಮ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಹಗರಣದ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಸಿಐಡಿಗೆ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರು ಎ1 ಆರೋಪಿಯಾಗಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.